ಮಡಿಕೇರಿ, ಡಿ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 2019-20ನೇ ಸಾಲಿನ ಐಇಸಿ ಯೋಜನೆಯಡಿ ಜಿಲ್ಲಾ ಮಟ್ಟದ ಆಯುಷ್ ವಿಚಾರ ಸಂಕಿರಣ (ಟಿಎಸ್‍ಪಿ) ಕಾರ್ಯಕ್ರಮವು ತಾ.31 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಯುಷ್ ಕಚೇರಿಯ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಬೆಂಗಳೂರು ಆಯುಷ್ ನಿರ್ದೇಶನಾಲಯದ ಮಾನ್ಯ ಆಯುಕ್ತರಾದ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಆಯುಷ್ ಅಧಿಕಾರಿ ಬಿ.ಎಚ್. ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.