ಮಡಿಕೇರಿ, ಡಿ. 30 : ಕ್ರಿಯೇಟಿವ್ ಗುರುಕುಲ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್‍ನ ವಿಜ್ಞಾನ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ನಡೆಯಿತು.

ಕಾರ್ಯಪ್ಪ ಕಾಲೇಜು ಆವರಣದಲ್ಲಿ ನಡೆದ ಸ್ಥಳದಲ್ಲೇ ತಯಾರಿಸುವ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ನಾಪೋಕ್ಲು ಶ್ರೀರಾಮ ಟ್ರಸ್ಟ್ ಪ್ರೌಢ ಶಾಲೆ ಪ್ರಥಮ, ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ದ್ವಿತೀಯ ಹಾಗೂ ಗೋಣಿಕೊಪ್ಪದ ಲಯನ್ಸ್ ಶಾಲೆ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.

ಕಾರ್ಯಪ್ಪ ಕಾಲೇಜ್‍ನ ಉಪನ್ಯಾಸಕ ಎನ್.ಜಗನ್ನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಕ್ರಿಯೇಟಿವ್ ಗುರುಕುಲ ಸಂಸ್ಥೆಯ ಅಧ್ಯಕ್ಷ ಡಾ.ಮೂಡೇರ ಜಗದೀಶ್, ಟ್ರಸ್ಟಿ ಡಾ.ಗೀತಾ ಹಾಗೂ ಶಿಕ್ಷಕ ವೃಂದ ಬಹುಮಾನ ವಿತರಣಾ ಸಮಾರಂಭದಲ್ಲಿ ಹಾಜರಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು. ಜಿಲ್ಲೆಯ ಅನೇಕ ಶಾಲೆಗಳ ವಿದ್ಯಾರ್ಥಿಗಳ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನಾರ್ಹ ಪ್ರದರ್ಶನ ತೋರಿದವು.