ಕೂಡಿಗೆ, ಡಿ. 30: ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ವಿಶೇಷ ಘಟಕದ ಉದ್ಘಾಟನಾ ಸಮಾರಂಭವು ಹೆಬ್ಬಾಲೆಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಘಟಕವನ್ನು ಕಣಿವೆ ಸಾಹಿತಿ ಭಾರಧ್ವ್ವಾಜ್ ಕೆ. ಆನಂದತೀರ್ಥ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು; ಬದುಕಿನ ಶಿಕ್ಷಣದೊಂದಿಗೆ ಸಾಹಿತ್ಯವು ಮುಖ್ಯ ವಾಗಿರುತ್ತದೆ. ಯಶಸ್ಸಿಗೆ ಪೂರಕವಾಗಿ ಸಾಹಿತ್ಯವು ಅದರಲ್ಲಿ ಅಡಕವಾಗಿ ರುತ್ತದೆ. ಭಾಷೆ ಮತ್ತು ಸಂಸ್ಕøತಿಯನ್ನು ಉಳಿಸುವುದು ಎಲ್ಲರ ಜವಾಬ್ದಾರಿಂ iÀiÁಗಿದೆ. ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ತೊಡಗಲು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳ ಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಭಾವನೆಗಳನ್ನು ವ್ಯಕ್ತಪಡಿಸುವ ಸಂದರ್ಭದಲ್ಲಿ ಸಾಹಿತ್ಯ ಮೂಡುತ್ತದೆ. ಸಾಹಿತ್ಯ ಘಟಕಗಳನ್ನು ಪ್ರಾರಂಭಿಸುವ ಮೂಲಕ ಆಯಾ ಭಾಗಗಳಲ್ಲಿ ಅಲ್ಲಿನ ಸಾಂಸ್ಕøತಿಕ, ಸಾಹಿತ್ಯ ಚಟುವಟಿಕೆಗಳಿಗೆ ಸಹಕಾರಿಯಾಗುತ್ತದೆ. ನೂತನ ಘಟಕದ ಪದಾಧಿಕಾರಿಗಳು ಅಂತಹ ಸಾಹಿತ್ಯ ಚಟುವಟಿಕೆಗಳನ್ನು ಹೆಚ್ಚಿಸಲು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಹೆಬ್ಬಾಲೆಯ ನಿವೃತ್ತ ಕಾರ್ಯಪಾಲಕ ಅಭಿಯಂತರ ಜಿ.ಎಲ್. ರಾಮಪ್ಪ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಹೆಬ್ಬಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಎಲ್. ರಮೇಶ್, ಹೆಬ್ಬಾಲೆ ಪ್ರೌಢಶಾಲೆಯ ಗುರುವಂದನಾ ಸಮಿತಿಯ ಅಧ್ಯಕ್ಷ ಹೆಚ್.ವಿ. ಶಿವಪ್ಪ, ನೂತನ ಹೆಬ್ಬಾಲೆ ವಿಶೇಷ ಘಟಕದ ಅಧ್ಯಕ್ಷ ಟಿ.ಕೆ. ಪಾಂಡುರಂಗ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎನ್.ಎ. ಅಶ್ವತ್‍ಕುಮಾರ್, ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ, ಕುಶಾಲನಗರ ತಾಲೂಕು ಘಟಕದ ಕಾರ್ಯದರ್ಶಿ ಎನ್.ಆರ್. ನಾಗೇಶ್, ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ, ಹೆಬ್ಬಾಲೆ ಸಹಕಾರ ಬ್ಯಾಂಕಿನ ಅಧ್ಯಕ್ಷ ಹೆಚ್.ಜೆ. ಪರಮೇಶ್, ಶಿರಂಗಾಲ ಸಹಕಾರ ಬ್ಯಾಂಕಿನ ಅಧ್ಯಕ್ಷ ಚಂದ್ರಶೇಖರ್, ಕಾಲೇಜಿನ ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ, ಮುಖ್ಯೋಪಾಧ್ಯಾಯ ಗಣೇಶ್, ಸೇರಿದಂತೆ ಕಸಾಪ ಪದಾಧಿಕಾರಿಗಳು ಮತ್ತಿತರರು ಇದ್ದರು. ನೂತನ ಘಟಕದ 33 ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಕಾರ್ಯ ಕ್ರಮವನ್ನು ಶಿಕ್ಷಕ ವೆಂಕಟ ನಾಯಕ್, ಟಿ.ಕೆ. ಪಾಂಡುರಂಗ, ಶಿಕ್ಷಕಿ ಅನಿತ ನಿರ್ವಹಿಸಿದರು.