ಸಿದ್ದಾಪುರ, ಡಿ.31: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನ ಮನೆಯ ಮೇಲೆ ಪೋಲೀಸರು ದಾಳಿ ನಡೆಸಿ ಮದ್ಯ ವಶಪಡಿಸಿಕೊಂಡಿರುವ ಪ್ರಕರಣ ಚೆನ್ನಯ್ಯನ ಕೋಟೆಯಲ್ಲಿ ನಡೆದಿದೆ. ಚೆನ್ನಯ್ಯನ ಕೋಟೆ ಗ್ರಾಮದ ನಿವಾಸಿ ಸುನಿಲ್ ಎಂಬಾತ ತನ್ನ ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಹೆಚ್.ಸಿ. ಬೋಜಪ್ಪ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡು ಸುನಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.