ಮಡಿಕೇರಿ, ಡಿ. 31 : ಹಾಕಿ ಇಂಡಿಯಾ ವತಿಯಿಂದ ಜ.5ರಿಂದ 22ರವರೆಗೆ ಬೆಂಗಳೂರಿನ ಸಾಯಿ ಸೆಂಟರ್‍ನಲ್ಲಿ ನಡೆಯಲಿರುವ ಸೀನಿಯರ್ ವುಮೆನ್ ನ್ಯಾಷನಲ್ ಕೋಚಿಂಗ್ ಕ್ಯಾಂಪ್‍ಗೆ ತರಬೇತುದಾರರಾಗಿ ಕೊಡಗಿನ ಕಂಬಿಬಾಣೆಯ ಹೊನ್ನಂಪಾಡಿ ಅಂಕಿತಾ ಸುರೇಶ್ ಆಯ್ಕೆಯಾಗಿದ್ದಾರೆ. ಅಂಕಿತಾ ಅವರು ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪೊನ್ನಂಪೇಟೆಯ ಕ್ರೀಡಾ ವಸತಿ ನಿಲಯದಲ್ಲಿ ಹಾಕಿ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಲಾ-ಕಾಲೇಜು ಅವಧಿಯಲ್ಲಿ ಸೀನಿಯರ್ ನ್ಯಾಷನಲ್ 4, ಜೂನಿಯರ್ ನ್ಯಾಷನಲ್ 2, 5 ಆಲ್ ಇಂಡಿಯಾ ಅಂತರ ವಿಶ್ವ ವಿದ್ಯಾಲಯ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹಾಕಿ ಪಂದ್ಯಾವಳಿಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಿದ್ದಾರೆ.
ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿಯ ಜೂನಿಯರ್ ಕಾಲೇಜು, ಎಫ್‍ಎಂಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಅಂಕಿತಾ, ಚೆನ್ನೈನ ಅಣ್ಣಾಮಲೈ ವಿಶ್ವ ವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಡಿಕೇರಿಯ ಸಾಯಿ ವಸತಿ ನಿಲಯದಲ್ಲಿ ತರಬೇತಿ ಪಡೆದಿದ್ದಾರೆ. ಚೆನ್ನೈ, ಆಂಧ್ರಪ್ರದೇಶ, ಶಿವಮೊಗ್ಗದಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಕಿ ಕರ್ನಾಟದ ಸಬ್ ಜೂನಿಯರ್, ಜೂನಿಯರ್, ಸೀನಿಯರ್ ಮಹಿಳಾ ತಂಡಕ್ಕೆ ಕೋಚ್ ಆಗಿ ಪಾಲ್ಗೊಂಡಿದ್ದರು.