ಮೂರ್ನಾಡು, ಜ. 3: ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ತಾ. 4 ರಂದು (ಇಂದು) ನಡೆಯಲಿದೆ. ಬಾಚೆಟ್ಟಿರ ಕಮಲು ಮುದ್ದಯ್ಯ ಬಯಲು ರಂಗಮಂದಿರದಲ್ಲಿ ಪೂರ್ವಾಹ್ನ 10 ಗಂಟೆಗೆ ಆಯೋಜಿಸಲಾಗಿರುವ ಸಮಾರಂಭಕ್ಕೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಡೆಪ್ಯೂಟಿ ಕಮಿಷನರ್ ದೇವಣಿರ ಪ್ರೀತ್ ಗಣಪತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ವಹಿಸಲಿದ್ದು, ಬೆಂಗಳೂರಿನ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮೂಕೊಂಡ ಕೆ. ಗಣಪತಿ ಮತ್ತು ದೇವಣಿರ ಕೌಶಿಕ್ ಕಾರ್ಯಪ್ಪ ಅತಿಥಿಗಳಾಗಿ ಆಗಮಿಸಲಿದ್ದಾರೆ.