ಮಡಿಕೇರಿ, ಜ. 2: ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳ ಕಾರ್ಯಕ್ರಮ ಸೇರಿದಂತೆ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧ್ಯಕ್ಷತೆಯಲ್ಲಿ ತಾ. 4 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.