ಮಡಿಕೇರಿ, ಜ. 2: ಮಡೀಕೇರಿ ತಾಲೂಕಿನ ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯ ಕಗ್ಗೋಡ್ಲು ಮತ್ತು ಹಾಕತ್ತೂರು ಗ್ರಾಮದಲ್ಲಿ ಸುಮಾರು ರೂ. 3.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನ ರೂ. 1.35 ಕೋಟಿ, ಲೋಕೋಪಯೋಗಿ ಇಲಾಖೆಯ ರೂ. 2 ಕೋಟಿ, ಹೀಗೆ ಒಟ್ಟು ಸುಮಾರು ರೂ. 3.50 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ತಾ.ಪಂ. ಸದಸ್ಯೆ ತುಂತಜಿರ ಕುಮುದ, ಗ್ರಾ.ಪಂ. ಅಧ್ಯಕ್ಷೆ ಮಂದ್ರೀರ ಶಾರದ, ಸದಸ್ಯರಾದ ದೇವಿ ಪ್ರಸಾದ್, ಪಿಯೂಷ್ ಪೆರೇರ, ಹೇಮಾವತಿ, ಬಿಜೆಪಿ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್, ಬೆಳ್ಯಪ್ಪ, ಮಂಡುವಂಡ ಜೋಯಪ್ಪ, ಶ್ರೀಕಂಠಯ್ಯ, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.