ಮಡಿಕೇರಿ, ಜ. 2: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಜ್ಯೇಷ್ಠತೆಯನ್ನು ಮರು ಮೌಲ್ಯಮಾಪನ ಮಾಡಲು ನ್ಯಾಕ್ ಸಮಿತಿಯು ತಾ. 3 ಮತ್ತು 4 ರಂದು ಕಾಲೇಜಿಗೆ ಭೇಟಿ ನೀಡುತ್ತಿದ್ದು, ಈ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಪೋಷಕ ಸದಸ್ಯರೊಂದಿಗೆ ಸಂವಾದವನ್ನು ತಾ. 3 ರಂದು ಅಪರಾಹ್ನ 3 ರಿಂದ 5 ರವರೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಆಸಕ್ತ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕಾಗಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.