ಸುಂಟಿಕೊಪ್ಪ, ಜ. 2: ಕೊಡಗರಹಳ್ಳಿ ವ್ಯಾಪ್ತಿಯ ಕೂರ್ಗ್ಹಳ್ಳಿ ಬಳಿಯಲ್ಲಿ ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನ ಚಾಲಕಿಗೆ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ ಕೊಡಗರಹಳ್ಳಿ ಸಮೀಪದ ಕೂರ್ಗ್ಹಳ್ಳಿ ತೋಟದ ಬಳಿಯಲ್ಲಿ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುತ್ತಿದ್ದ (ಕೆಎ04 ಎಂವಿ 3230) ಕಾರು ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸಂಸ್ಥೆಯ ರಾಜಹಂಸ (ಕೆಎ19-ಎಫ್ 3170) ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಈ ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರನ್ನು ಚಲಾಯಿಸುತ್ತಿದ್ದ ಚಾಲಕಿ ಪಾರ್ವತಿ ಹಾಗೂ ಇನ್ನೋರ್ವರಿಗೆ ತಲೆ, ಕಾಲುಗಳಿಗೆ ಪೆಟ್ಟಾಗಿದ್ದು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ತೆರಳಿ ಸ್ಥಳ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿಕೊಂಡು ವಾಹನಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.