ಮಡಿಕೇರಿ, ಜ. 3: ವೀರಾಜಪೇಟೆ ತಾಲೂಕಿನ ಬಾಳೆಲೆ ಹೋಬಳಿ ಮಟ್ಟದ 2019-20ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮವನ್ನು ತಾ. 6 ರಂದು ಪೂರ್ವಾಹ್ನ 10.30 ಗಂಟೆಗೆ ಬೆಸಗೂರು ಗ್ರಾಮದ ಶ್ರೀ ಮಹಾದೇವರ ದೇವಸ್ಥಾನದ ಆವರಣದಲ್ಲಿ ಕೃಷಿ ವಸ್ತು ಪ್ರದರ್ಶನ ಮತ್ತು ರೈತ ಸಂವಾದದೊಂದಿಗೆ ನಡೆಸಲಾಗುತ್ತದೆ.