ಮಡಿಕೇರಿ, ಜ. 3: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ತಾ. 2 ರಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದರು.
ಭೇಟಿ ಸಮಯದಲ್ಲಿ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿ, ವಿವಿಧ ವಿಭಾಗಗಳ ವೀಕ್ಷಣೆ ಮಾಡಿ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು. ಭೇಟಿ ಸಮಯದಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕೆ.ಬಿ. ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಮತ್ತು ವಿಭಾಗದ ಮುಖ್ಯಸ್ಥರು ಮತ್ತು ವೈದ್ಯರುಗಳು ಹಾಜರಿದ್ದರು.