ಸೋಮವಾರಪೇಟೆ, ಜ. 2: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸ್ಥಳೀಯ ಕೊಡವ ಸಮಾಜದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಪೂರ್ವಭಾವಿ ಸಭೆ ನಡೆಯಿತು.

ಸಮಿತಿಯ ಪ್ರಾಂತೀಯ ಸಮನ್ವಯಕಾರ ಶಿವರಾಂ ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪೂರ್ವಭಾವಿ ಸಭೆಯಲ್ಲಿ ಪ್ರಮುಖರಾದ ಶ್ರೀನಾಥ್, ಶ್ರೀಲಕ್ಷ್ಮೀ, ಇಲ್ಲಿನ ಜೈಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ, ಉಷಾರಾಣಿ, ಮಂಜುಳಾ, ರಾಮ್‍ಶೆಟ್ಟಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.