ಮಡಿಕೇರಿ, ಜ. 4: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತಾ. 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ದಾಖಲಾತಿಗಳೊಂದಿಗೆ ವಿದ್ಯಾರ್ಥಿಗಳು ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ರೂ. 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಅಂಕಪಟ್ಟಿ, ಇತ್ತೀಚಿನ ಭಾವಚಿತ್ರ, ಆದಾಯ ಮಿತಿ ರೂ. 2.50 ಲಕ್ಷಕ್ಕಿಂತ ಹೆಚ್ಚು ರೂ. 10 ಲಕ್ಷ ಒಳಗಿರುವ ಸಿ.ಇ.ಟಿ. ಮೂಲಕ ಎಂ.ಬಿ.ಬಿ.ಎಸ್. ಬಿ.ಡಿ.ಎಸ್. ಬಿ.ಇ. ಬಿ.ಟೆಕ್, ಬಿ.ಆರ್ಕ್ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯದ ಕಾಲೇಜು, ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ. 100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗದಿಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.

ಅರ್ಹ ವಿದ್ಯಾರ್ಥಿಗಳು ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೆÇನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ವೀರಾಜಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.