ಸೋಮವಾರಪೇಟೆ, ಜ. 4: ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗಳಿಗೆ ಸರ್ಕಾರದಿಂದ ನಾಮನಿರ್ದೇಶನ ಸದಸ್ಯರಾಗಿ ನೇಮಿಸಲು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆರು ಮಂದಿಯ ಹೆಸರನ್ನು ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಿದ್ದಾರೆ.

ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ನಗರ ಬಿಜೆಪಿ ಅಧ್ಯಕ್ಷ ಎಸ್.ಆರ್. ಸೋಮೇಶ್, ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಶರತ್‍ಚಂದ್ರ, ಪತ್ರಕರ್ತ ಎಸ್. ಮಹೇಶ್ ಹಾಗೂ ಕುಶಾಲನಗರ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಕೆ.ಜಿ. ಮನು, ಪಕ್ಷದ ಪ್ರಮುಖರಾದ ಶಂಭುಲಿಂಗಪ್ಪ, ಎಂ.ವಿ. ನಾರಾಯಣ ಅವರುಗಳ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.