ಕುಶಾಲನಗರ, ಜ. 4: ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ 26ನೇ ವರ್ಷದ ಪಂಪಾ ಬೆಳಕು ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.
ದೇವಾಲಯದ ಆವರಣದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಅಯ್ಯಪ್ಪ ದೇವಾಲಯದ ಪಡಿ ಪೂಜೆಯೊಂದಿಗೆ ಅಯ್ಯಪ್ಪ ಮಾಲಾಧಾರಿಗಳು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರ ಕಾವೇರಿ ನದಿಯಲ್ಲಿ ಪೂಜೆ ಸಲ್ಲಿಸಿ, ದೇವಾಲಯಕ್ಕೆ ಹಿಂತಿರುಗಿ ಮಹಾಮಂಗಳಾರತಿ ನಡೆಯಿತು.
ದೇವಾಲಯದ ಅರ್ಚಕರಾದ ಕೃಷ್ಣಮೂರ್ತಿ ಭಟ್, ವಿಷ್ಣು ಭಟ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ಜರುಗಿದವು. ಗೆಳೆಯರ ಬಳಗದ ಪ್ರಮುಖರು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ವಿ.ಎಸ್. ಆನಂದಕುಮಾರ್, ಬಳಗದ ಸದಸ್ಯರಾದ ಚಂದ್ರು, ರಾಜೇಶ್, ರಾಕಿ, ವಸಂತ್ ಮತ್ತು ಜಯಪ್ರಕಾಶ್ ಸೇರಿದಂತೆ ಬಳಗದ ಸದಸ್ಯರು, ಅಯ್ಯಪ್ಪ ಮಾಲಾಧಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.