ಮಡಿಕೇರಿ, ಜ. 4 : ರಸ್ತೆ ಅವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಹಿನ್ನೆಲೆಯಲ್ಲಿ ನಗರಸಭೆ ವಿರುದ್ಧ ತಾ.6 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಪೌರಾಯುಕ್ತರ ಭರವಸೆಯ ಹಿನ್ನೆಲೆಯಲ್ಲಿ ಮುಂದೂಡಿ ರುವುದಾಗಿ ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೀಲಾಶೇಷಮ್ಮ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಾರ್ಚ್ ಅಂತ್ಯದೊಳಗೆ ರಸ್ತೆಗಳ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸುವುದಾಗಿ ನಗರಸಭಾ ಆಯುಕ್ತರು ಭರವಸೆ ನೀಡಿದ್ದಾರೆ, ಅಲ್ಲದೆ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಕಾಮಗಾರಿ ಆರಂಭ ಗೊಂಡಿದೆ. ಕಾಮಗಾರಿಯ ನಡುವೆಯೇ ಮತ್ತೆ ಅವ್ಯವಸ್ಥೆಗಳು ಕಂಡು ಬಂದರೆ, ಕಳಪೆ ಕಾಮಗಾರಿ ನಡೆದರೆ ಅಥವಾ ಭರವಸೆಯಂತೆ ಅಭಿವೃದ್ಧಿ ಕಾರ್ಯ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯ ವಾಗುತ್ತದೆ ಎಂದು ತಿಳಿಸಿದ್ದಾರೆ.