ಸೋಮವಾರಪೇಟೆ, ಜ. 6: ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪದವಿ ಕಾಲೇಜಿನ ದಶಮಾನೋತ್ಸವ ಸಮಾರಂಭ ತಾ.7ರಂದು(ಇಂದು) ವಿದ್ಯಾಸಂಸ್ಥೆಯ ಆವರಣದಲ್ಲಿ ಅಪರಾಹ್ನ 4.30ಕ್ಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮೈಸೂರು ಧರ್ಮಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಕೆ.ಎ.ವಿಲಿಯಂ, ಧರ್ಮಗುರು ಸಿ.ರಾಯಪ್ಪ, ಶಾಸಕರಾದ ಅಪ್ಪಚ್ಚು ರಂಜನ್, ಮೈಸೂರು ರಾಮಕೃಷ್ಣ ಮಠದ ಸ್ವಾಮಿ ಶಾಂತಿವೃತಾನಂದ, ಕೊಡಗು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಭವಾನಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪೆರಿಗ್ರೀನ್ ಎಸ್.ಮಚ್ಚಾಡೋ, ವಕ್ಫ್ ಮಂಡಳಿಯ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಕೆ.ಎ.ಯಾಕೂಬ್, ವೃತ್ತ ನಿರೀಕ್ಷಕ ನಂಜುಂಡೇಗೌಡ ಭಾಗವಹಿಸಲಿದ್ದಾರೆ.