ಸೋಮವಾರಪೇಟೆ, ಜ.5: ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ವತಿಯಿಂದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಫಲಿತಾಂಶ ಉತ್ತಮ ಪಡಿಸಲು ಶಿಕ್ಷಕರಿಗೆ ತಾ. 6ರಂದು (ಇಂದು) ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು ತಿಳಿಸಿದ್ದಾರೆ.

ಇಲ್ಲಿನ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯುವ ಕಾರ್ಯಾಗಾರದ ಅಧ್ಯಕ್ಷತೆಯನ್ನು ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದು, ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ, ಮೊರಾರ್ಜಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.