ಮಡಿಕೇರಿ ಜ. 5: ವಿದ್ಯಾರ್ಥಿಗಳು ತಮ್ಮ ಕಲಿಕೆಯೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.
ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ (ಬಿ.ಜಿ.ವಿ.ಎಸ್) ವತಿಯಿಂದ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6,7 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿರುವ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬದ ಸಮೀಪದ ಕೇಂದ್ರದಲ್ಲಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು.
ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ ಮಕ್ಕಳ ಕಲಿಕಾ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು. ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಮಾತನಾಡಿ ಮಕ್ಕಳು ಸಂತಸದಿಂದ ಕಲಿಯಲು ಈ ಹಬ್ಬ ಸಹಕಾರಿಯಾಗಿದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ಮಾತನಾಡಿ ಮಕ್ಕಳ ಹಬ್ಬದಲ್ಲಿ ಮಕ್ಕಳಿಗೆ ಶಿಕ್ಷಕರು ಕಲಿಸುತ್ತಿರುವ ವಿವಿಧ ಚಟುವಟಿಕೆಗಳ ಕುರಿತು ವಿವರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ, ಶಿಕ್ಷಣಾಧಿಕಾರಿ ಕಾಶಿನಾಥ್, ಸಂಯೋಜಕಿ ಎಂ.ಜೆ.ಗಂಗಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಟಿ.ಜಿ.ಪ್ರೇಮ್ ಕುಮಾರ್, ಡಿ.ಚಂದನ್, ಆರ್.ದಿವಾಕರ್, ಡಿ.ಎಂ.ರೇವತಿ, ಪಿ.ಯು.ರಂಜಿತ್, ಸುಮ, ಶ್ರೀನಿವಾಸ್, ಶಾಲೆಯ ಮುಖ್ಯ ಶಿಕ್ಷಕ ಬಿ.ಶಿವರಾಮ್, ಮಡಿಕೇರಿ ಬಿ.ಆರ್.ಸಿ ಪುಟ್ಟರಂಗನಾಥ್ ಮತ್ತು ಇತರರು ಪಾಲ್ಗೊಂಡಿದ್ದರು.