ಮಡಿಕೇರಿ, ಜ. 5 : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಮಾಧ್ಯಮ ಕಾರ್ಯಾಗಾರ’ ಹಮ್ಮಿಕೊಳ್ಳಲಾಗಿದೆ.
ತಾ. 7ರಂದು ಕಾಲೇಜು ಸೆಮಿನಾರ್ ಹಾಲ್ನಲ್ಲಿ ಕಾರ್ಯಾಗಾರಕ್ಕೆ ಚಾಲನೆ ಸಿಗಲಿದೆ. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕಳುವಾರದ ಕನ್ನಡ ಉಪನ್ಯಾಸಕ ಜಮೀರ್ ಅಹಮ್ಮದ್ ಪಾಲ್ಗೊಳ್ಳಲಿದ್ದು, ‘ಪತ್ರಿಕೋದ್ಯಮದಲ್ಲಿನ ಅವಕಾಶಗಳು’ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ.