ಮಡಿಕೇರಿ, ಜ. 6 : ದೇಶವ್ಯಾಪಿ ತಾ. 8 ರಂದು ವಿವಿಧ ಕಾರ್ಮಿಕ ಸಂಘಟನೆಗಳಿಂದ ನಡೆಯುತ್ತಿರುವ ಸಾರ್ವತ್ರಿಕ ಮುಷ್ಕರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ಮಡಿಕೇರಿ ತಾಲೂಕು ಘಟಕ ಬೆಂಬಲ ನೀಡಲಿದೆ ಎಂದು ಸಂಘದ ತಾಲೂಕು ಅಧ್ಯಕ್ಷೆ ಕೆ.ಎಸ್.ಮುತ್ತಮ್ಮ ಹಾಗೂ ಕಾರ್ಯದರ್ಶಿ ಅಕ್ಕಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಅಂದು ಬಂದ್ ಆಗಲಿದ್ದು, ಗೌರವಧನ ಹೆಚ್ಚಳ, ಪಿಂಚಣಿ ನಿಗಧಿ, ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ಸಂದರ್ಭ ಆಗ್ರಹಿಸಲಿದ್ದಾರೆ ಎಂದು ಹೇಳಿದ್ದಾರೆ.