ಮಡಿಕೇರಿ, ಜ. 6: ವೀರಾಜಪೇಟೆ ತಾಲೂಕಿನಲ್ಲಿ 2019-20ನೇ ಸಾಲಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವ ಸಮೀಕ್ಷೆ ಕಾರ್ಯ ತಾ. 6 ರಿಂದ 13 ರವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಲು ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು, ಸ್ವಯಂ ಸೇವಾ ಸಂಸ್ಥೆಗಳು, ಸಹಕರಿಸಬೇಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ: 9480695262 ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ: 9480695265ನ್ನು ಸಂಪರ್ಕಿಸಬಹುದು.