ಮಡಿಕೇರಿ, ಜ. 4: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ತಾ. 10 ಮತ್ತು 11 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ರಾಜ್ಯ ಸರ್ಕಾರಿ ನೌಕರ ಕ್ರೀಡಾ ಪಟುಗಳು ದೂ.ಸಂ :08272-228985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.