ಸೋಮವಾರಪೇಟೆ, ಜ. 6: ಜಿಲ್ಲಾ ಪಂಚಾಯತ್ ಅನುದಾನದಿಂದ ಕುಂಬೂರು ಪೈಸಾರಿಗೆ ತೆರಳುವ ರಸ್ತೆಯನ್ನು ಕಾಂಕ್ರಿಟೀಕರಣ ಗೊಳಿಸ ಲಾಗಿದ್ದರೂ, ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಸ್ಥಳೀಯರಿಗೆ ಸಂಕಷ್ಟ ಒದಗಿದೆ. ಕಾಂಕ್ರೀಟ್ ರಸ್ತೆಯ ಎರಡೂ ಬದಿಯಲ್ಲಿ ಅವೈಜ್ಞಾನಿಕವಾಗಿ ಮಣ್ಣು ಮತ್ತು ಕಲ್ಲು ಸುರಿದಿರುವದರಿಂದ, ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ತಿಂಗಳು ಕಳೆದಿದ್ದರೂ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತಡೆಬಿದ್ದದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.