*ಗೋಣಿಕೊಪ್ಪಲು, ಜ. 6: ಪೌರತ್ವ ಕಾಯ್ದೆ ಬೆಂಬಲಿಸಿ ವೀರಾಜಪೇಟೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ತಾಲೂಕು ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ನೇತೃತ್ವದಲ್ಲಿ ಗೋಣಿಕೊಪ್ಪಲು ಪಟ್ಟಣದ ಮನೆ ಮನೆಗಳಿಗೆ ಪೌರತ್ವ ಕಾಯ್ದೆ ಮಾಹಿತಿಯ ಕರಪತ್ರಗಳನ್ನು ವಿತರಿಸಿ ಪೌರತ್ವ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಪೌರತ್ವ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಂ ಸಮುದಾಯಕ್ಕೆ ಯಾವುದೇ ಸಮಸ್ಯೆ ಇಲ್ಲ. ವಿರೋಧ ಪಕ್ಷದವರ ರಾಜಕೀಯ ಷಡ್ಯಂತರಕ್ಕೆ ಬಲಿಯಾಗದೆ ಅಪಪ್ರಚಾರಗಳಿಗೆ ಕಿವಿಗೊಡದೆ ಸತ್ಯ ಸತ್ಯತೆಗಳ ಬಗ್ಗೆ ಅರಿತುಕೊಳ್ಳಿ ಎಂದು ಮನವರಿಕೆ ಮಾಡಲಾಯಿತು.
ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಿಂದ ಪಟ್ಟಣದ ಬೀದಿ ಬೀದಿಗಳಲ್ಲಿ ಮತ್ತು ಮನೆ ಮನೆಗಳಿಗೆ ತೆರಳಿ ಕರಪತ್ರ ವಿತರಿಸಿ ಪ್ರಚಾರ ಕಾರ್ಯ ನಡೆಸಿದರು. ತಾ.ಪಂ. ಸದಸ್ಯ ಜಯಾ ಪೂವಯ್ಯ, ಟಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್, ತಾಲೂಕು ನಿಕಟಪೂರ್ವ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ಜಿಲ್ಲಾ ಬಿಜೆಪಿ ಖಜಾಂಚಿ ಗುಮ್ಮಟ್ಟೀರ ಕಿಲನ್ ಗಣಪತಿ, ತಾಲೂಕು ಮಹಿಳಾ ಅಧ್ಯಕ್ಷೆ ಚೇಂದಂಡ ಸುಮಿ ಸುಬ್ಬಯ್ಯ, ಉಪಾಧ್ಯಕ್ಷೆ ರಾಣಿ ನಾರಾಯಣ, ಅನಿತಾ, ಗೋಣಿಕೊಪ್ಪಲು ಸ್ಥಾನೀಯ ಅಧ್ಯಕ್ಷ ಮಲ್ಚೀರ ಗಾಂಧಿ ದೇವಯ್ಯ, ಗ್ರಾ.ಪಂ. ಸದಸ್ಯ ರಾಮಕೃಷ್ಣ, ಸುರೇಶ್ ರೈ, ಹಿಂದೂ ಜಾಗರಣಾ ವೇದಿಕೆ ಪಟ್ಟಣ ಅಧ್ಯಕ್ಷ ಖಾದೀರ ಪೆÇನ್ನಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜೇಶ್, ಕಾರ್ಯಕರ್ತರಾದ ಮಧು, ವಿವೇಕ್ ಹಾಜರಿದ್ದರು.