ಮಡಿಕೇರಿ, ಜ. 6: ನವ ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ 2019-20 ನೇ ಸಾಲಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಿದ್ದು, ಅರ್ಹ ನವ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ನವ ಕಾನೂನು ಪದವೀಧರರು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು, ಮಡಿಕೇರಿ, 2ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು, ಮಡಿಕೇರಿ (ಕಾರ್ಯನಿರ್ವಹಣೆ-ವೀರಾಜಪೇಟೆ) ಹಾಗೂ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಸೋಮವಾರಪೇಟೆ ಮುಖಾಂತರ ದಾಖಲೆ ಪ್ರತಿಗಳೊಂದಿಗೆ ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಫೆಬ್ರವರಿ, 03 ಕೊನೆಯ ದಿನವಾಗಿದೆ. ಹೊಸದಾಗಿ ವಕೀಲರ ವೃತ್ತಿಯಲ್ಲಿ ತೊಡಗುವ ಕಾನೂನು ಪದವೀಧರರು ರಾಜ್ಯ ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿದ ನಂತರ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷರಿಂದ ಪ್ರಮಾಣ ಪತ್ರ ಪಡೆದು ಸಂಬಂಧಪಟ್ಟ ಸಮಿತಿಯ ಸಂಬಂಧಿತ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರುಗಳ ಮುಖಾಂತರ ಮತ್ತು ಜಿಲ್ಲಾ ಹಂತದಲ್ಲಿ ಅರ್ಹ ಕಾನೂನು ಪದವೀಧರರು ನೇರವಾಗಿ ಸಮಿತಿಯ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿ.ವಿ.ಮಲ್ಲಾಪುರ ಅವರು ತಿಳಿಸಿದ್ದಾರೆ.