ಮಡಿಕೇರಿ, ಜ. 5: ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಂದ ಮತದಾರರ ಪಟ್ಟಿ ವೀಕ್ಷಕ ಜಾವೇದ್ ಅಖ್ತರ್ ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಮಾಹಿತಿ ಪಡೆದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ತಹಶೀಲ್ದಾರ್ ಮಹೇಶ್, ಚುನಾವಣಾ ತಹಶೀಲ್ದಾರ್ ಕುಸುಮ, ಶಿರಸ್ತೆದಾರ್ ಪ್ರಕಾಶ್, ಅನಿಲ್ ಕುಮಾರ್, ಸಿನೋಜ್, ಇತರರು ಇದ್ದರು.
ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮನವಿ: ಜನವರಿ 1, 2020 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾರ್ವತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8ಎ ರಲ್ಲಿ ಮತ್ತು ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎ ರಲ್ಲಿ 2020ರ ಜನವರಿ, 15 ರವರೆಗೆ ನಿಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ (ನಮೂನೆ-6 ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-8ಎ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿ ಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು. ಹಾಗೂ ತಿತಿತಿ.ಛಿeoಞಚಿಡಿಟಿಚಿಣಚಿಞಚಿ. ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿ ಪಡೆಯಬಹುದು. ತಿತಿತಿ.ಟಿvsಠಿ.ಟಿiಛಿ.iಟಿ ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ನಮೂನೆ 6, 6ಎ, 7, 8 ಮತ್ತು 8ಎ ನ್ನು ಹಾಕಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.