ಸೋಮವಾರಪೇಟೆ, ಜ. 6: ಕುಶಾಲನಗರ ಮತ್ತು ಸೋಮವಾರಪೇಟೆ 33ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಐಪಿಡಿಎಸ್ ಯೋಜನೆಯಡಿ ವಾಹಕ ಬದಲಾವಣೆ ಕಾಮಗಾರಿ ನಡೆಯುವುದರಿಂದ ತಾ. 8 ರಂದು ಸೋಮವಾರಪೇಟೆ ಪ.ಪಂ ಹಾಗೂ ಒಂಬತ್ತು ಗ್ರಾ.ಪಂ. ವ್ಯಾಪ್ತಿಗಳಲ್ಲಿ ವಿದ್ಯುತ್ ಇರುವದಿಲ್ಲ. ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಚೌಡ್ಲು, ಹಾನಗಲ್ಲು, ದೊಡ್ಡಮಳ್ತೆ, ಐಗೂರು, ಅಬ್ಬೂರುಕಟ್ಟೆ, ಶಾಂತಳ್ಳಿ, ಕಿರಗಂದೂರು, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವದಿಲ್ಲ.