ಮಡಿಕೇರಿ, ಜ. 6: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿ ನಿಡ್ತ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬಹುಭಾಷಾ ಸಾಹಿತಿ ನಾಗೇಶ್ ಕಾಲೂರು ಅವರನ್ನು ಆಯ್ಕೆ ಮಾಡಲಾಗಿದೆ. ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಮಿತಿ ¸Àಭೆಯಲ್ಲಿ ನಾಗೇಶ್ ಕಾಲೂರು ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ಈ ತಿಂಗಳ 31 ಹಾಗೂ ಫೆ 1ರಂದು ನಿಡ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ. ಸಭೆಯಲ್ಲಿ ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ಮಡಿಕೇರಿ ತಾಲೂಕು

ಅಧ್ಯಕ್ಷ ಕುಡೆಕಲ್ ಸಂತೋಷ್, ವೀರಾಜಪೇಟೆ ಅಧ್ಯಕ್ಷ ಮಧೋಶ್ ಪೂವಯ್ಯ, ನಿರ್ದೇಶಕರುಗಳಾದ ಕೋಡಿ ಚಂದ್ರಶೇಖರ್, ಲೋಕನಾಥ್ ಅಮೆಚೂರ್, ಎಸ್.ಪಿ.ಪ್ರಸನ್ನ ಇದ್ದರು.