ಸೋಮವಾರಪೇಟೆ, ಜ. 7: ಜಿಲ್ಲೆಯ ಗಡಿಭಾಗದ ಸಕಲೇಶಪುರ ತಾಲೂಕಿನ ಗೊದ್ದು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ದೊಡ್ಡಯ್ಯನ ದೇವಸ್ಥಾನದಲ್ಲಿ 349ನೇ ಜಾತ್ರಾ ಮಹೋತ್ಸವ ಅಂಗವಾಗಿ ತಾ. 16 ರಂದು ದೊಡ್ಡಯ್ಯನ ಜಾತ್ರೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಬಸವರಾಜು ತಿಳಿಸಿದ್ದಾರೆ. ಅಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿವೆ.

ಹೆಗ್ಗಡಳ್ಳಿ ಮಠದ ಶ್ರೀ ಷಡ್ಭಾವರಹಿತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಹಾಸನ ಆದಿ ಚುಂಚನಗಿರಿ ಮಠದ ಶಂಭುನಾಥ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ತಾ. 15 ರಂದು ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.