ಸೋಮವಾರಪೇಟೆ, ಜ. 7: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-2021ನೇ ಸಾಲಿಗೆ ಪೊನ್ನಂಪೇಟೆ ಯಲ್ಲಿರುವ ಕ್ರೀಡಾವಸತಿ ನಿಲಯಕ್ಕೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಇಲ್ಲಿನ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ನಡೆಯಿತು. 14 ವರ್ಷದೊಳಗಿನ ವಯೋಮಿತಿಯ ಬಾಲಕ ಮತ್ತು ಬಾಲಕಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

55 ಬಾಲಕರು ಮತ್ತು 15 ಬಾಲಕಿಯರು ತಮ್ಮ ಸಾಮಥ್ರ್ಯ ಪ್ರದರ್ಶಿಸಿದರು.

ಪೊನ್ನಂಪೇಟೆ ಕ್ರೀಡಾ ವಸತಿ ಶಾಲಾ ಕೋಚ್‍ಗಳಾದ ಬುಟ್ಟಿಯಂಡ ಚಂಗಪ್ಪ, ಕುಪ್ಪಂಡ ಸುಬ್ಬಯ್ಯ, ವಾರ್ಡನ್ ಬಿ.ಎಲ್.ಮಂಜುನಾಥ್, ಸ್ಪೋಟ್ರ್ಸ್ ಕ್ಲಬ್‍ನ ಪದಾಧಿಕಾರಿಗಳಾದ ಅಶೋಕ್ ಸಹಕರಿಸಿದರು. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಾ.11 ರಂದು ಬೆಳಿಗ್ಗೆ 9ಗಂಟೆಗೆ ಪೊನ್ನಂಪೇಟೆಯಲ್ಲಿನ ತಾಲೂಕು ಮಿನಿ ಕ್ರೀಡಾಂಗಣದಲ್ಲಿ ಹಾಜರಾಗಬೇಕೆಂದು ಕೋಚ್ ಸುಬ್ಬಯ್ಯ ತಿಳಿಸಿದ್ದಾರೆ.