ಮಡಿಕೇರಿ, ಜ. 7: ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯ ಬಿಜೆಪಿ ಘಟಕ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಅಭಿಯಾನ ನಡೆಯಿತು.

ಮಡಿಕೇರಿ ತಾಲೂಕು ಬಿಜೆಪಿ ಅಧ್ಯಕ್ಷ ಕಾಂಗಿರ ಸತೀಶ್ ನೇತೃತ್ವದ ತಂಡ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿತು. ಪೌರತ್ವ ಕಾಯ್ದೆ ದೇಶದ ಅಸ್ತಿತ್ವಕ್ಕೆ ಅನಿವಾರ್ಯವಾಗಿದ್ದು, ಯಾವುದೇ ಗೊಂದಲಕ್ಕೆ ಒಳಗಾಗದಂತೆ ಜನರಲ್ಲಿ ಮನವಿ ಮಾಡಿದರು. ಅಭಿಯಾನದಲ್ಲಿ ಸ್ಥಳೀಯ ಬಿಜೆಪಿ ಮುಖಂಡರಾದ ಬಾಳೆಕಜೆ ಯೋಗೇಂದ್ರ, ಕೋಚನ ಅನೂಪ್, ಮುಕ್ಕಾಟಿ ಚಿದಂಬರ ಸೇರಿದಂತೆ ಹಲವರು ಭಾಗವಹಿಸಿದ್ದರು.