ಮಡಿಕೇರಿ, ಜ. 7: ಜಿಲ್ಲಾ ಗೃಹ ರಕ್ಷಕದಳ ಕಚೇರಿಯಲ್ಲಿ 2019-20ನೇ ಸಾಲಿನ ಸಾಲಿಗೆ ಗೃಹ ರಕ್ಷಕದಳದ ಪ್ರಸ್ತುತ ಖಾಲಿ ಇರುವ 250 ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ 20 ವರ್ಷದಿಂದ 45 ವರ್ಷದೊಳಗಿನ ಹಾಗೂ 7ನೇ ತರಗತಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಾ. 10 ರಿಂದ 31 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಮಡಿಕೇರಿ ದೂ. 08272-228427, ಜಿಲ್ಲೆಯಲ್ಲಿರುವ ಗೃಹ ರಕ್ಷಕದಳದ ಘಟಕಗಳಾದ ಮಡಿಕೇರಿ, ಮೂರ್ನಾಡು, ಭಾಗಮಂಡಲ, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ, ಶಾಂತಳ್ಳಿ, ಶನಿವಾರಸಂತೆ ಘಟಕ ಕಚೇರಿಯ ಘಟಕಾಧಿಕಾರಿಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ಕುಮಾರ್ ತಿಳಿಸಿದ್ದಾರೆ.
ಪ್ರೋತ್ಸಾಹ ಧನಕ್ಕೆ
ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ. 25 ಸಾವಿರಗಳ ಪ್ರೋತ್ಸಾಹ ಧನ ನೀಡುವ ಯೋಜನೆ ರೂಪಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್ ಹಾಗೂ ಪಾನ್ ಕಾರ್ಡ್ನ ಜೆರಾಕ್ಸ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕು. ಎ4 ಸೈಜ್ ಹಾಳೆಯಲ್ಲಿ ಕನಿಷ್ಟ 100 ಪುಟಗಳಿರುವ ಡಿಟಿಪಿ ಮಾಡಿದ ಕೃತಿಯನ್ನು ಸಲ್ಲಿಸಬಹುದಾಗಿದೆ. 18 ರಿಂದ 40 ವರ್ಷದ ಒಳಗಿನ ಯಾವುದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯ ಮತ್ತು ಪ್ರಬಂಧ (ಜೀವನ ಚರಿತ್ರೆ), ಪ್ರವಾಸ ಕಥನ ಮತ್ತು ಅಂಕಣ ಬರಹ), ಸಾಹಿತ್ಯ ಮಾನವಿಕ, ವಿಜ್ಞಾನ, ವಿಚಾರ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿರಬೇಕು.
ಅನುವಾದಗಳನ್ನು ಪಠ್ಯ ಪುಸ್ತಕಗಳನ್ನು ಅಭಿನಂದನಾ ಗ್ರಂಥಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟ್ರೀಯ ನಾಯಕರು ಮುಂತಾದವುಗಳ ಕುರಿತು ನೇರವಾಗಿಯೇ ಆಗಲಿ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ಹಾಗೂ ರಾಷ್ಟ್ರೀಯ ಭಾವೈಕ್ಯತೆಗಳಿಗೆ ಧಕ್ಕೆ ತರುವಂತಹ ಪ್ರಸ್ತಾಪ ಆಗಿದ್ದಲ್ಲಿ ಅವುಗಳನ್ನು ಪರಿಗಣಿಸಲಾಗುವುದಿಲ್ಲ. ಪ್ರಾಧಿಕಾರಕ್ಕೆ ಸಲ್ಲ್ಲಿಸಲ್ಪಡುವ ಅರ್ಜಿಗಳನ್ನು ಹಸ್ತ ಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ತಾ. 25 ರೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ವೆಬ್ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ@gmಚಿiಟ.ಛಿom ದೂ. 080-22484516/ 22017704 ನ್ನು ಸಂಪರ್ಕಿಸಬಹುದು.
ಕ್ರೀಡಾ ವಿದ್ಯಾರ್ಥಿ ವೇತನಕ್ಕೆ
ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2019ರ ಜನವರಿ 1 ರ ನಂತರ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2019ರ ಜನವರಿ 1 ರಿಂದ 2019 ರ ಡಿಸೆಂಬರ್ 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು ತಾ. 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಮಡಿಕೇರಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.