ಗೋಣಿಕೊಪ್ಪಲು, ಜ. 8: ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹೆಚ್.ಎಂ. ಪಾರ್ವತಿ ಅವರಿಗೆ ಬೆಂಗಳೂರಿನ ಗುರು ಸದನದಲ್ಲಿ ನಡೆದ ಭಾರತದ ಪ್ರಥಮ ಮಹಿಳಾ ಸಾಧನ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಸದ್ಭಾವನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘಗಳ ಒಕ್ಕೂಟದ ವತಿಯಿಂದ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ದೊರಕಿದೆ. ಕಳೆದ 28 ವರ್ಷಗಳಿಂದ ಶಿಕ್ಷಕಿ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಇವರಿಗೆ ಜನಮೆಚ್ಚಿದ ಶಿಕ್ಷಕಿ ಪ್ರಶಸ್ತಿಯೂ ಲಭ್ಯವಾಗಿತ್ತು.