ಶನಿವಾರಸಂತೆ, ಡಿ. 8: ಪಟ್ಟಣದ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷಿಯಲ್ ಆಟ್ರ್ಸ್ ಹಾಗೂ ಯೋಗ ಸಂಸ್ಥೆ ವತಿಯಿಂದ ತಾ. 18 ಮತ್ತು 19 ರಂದು ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.