ಮಡಿಕೇರಿ, ಜ. 8: ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕರೆ ನೀಡಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಪ್ರತಿಭಟನೆಗಳು ನಡೆದವು. ಅಂಚೆಕಚೇರಿಗಳು ಹಾಗೂ ಕೆಲ ಬ್ಯಾಂಕ್ಗಳು ಮುಚ್ಚಲ್ಪಟ್ಟಿದ್ದವು. ಇವುಗಳನ್ನು ಹೊರತುಪಡಿಸಿ ಬೇರಾವುದೇ ಬಂದ್ ನಡೆಯಲಿಲ್ಲ.ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಜನಜೀವನ ಎಂದಿನಂತಿತ್ತು. ಖಾಸಗಿ ಬಸ್, ಸರ್ಕಾರಿ ಬಸ್ಗಳ ಓಡಾಟ ಎಂದಿನಂತಿತ್ತು. ಆಟೋರಿಕ್ಷಾ, ಖಾಸಗಿ ವಾಹನಗಳು ಸಂಚರಿಸಿದವು. ಶಾಲಾ - ಕಾಲೇಜು, ಕಚೇರಿಗಳು ಎಂದಿನಂತೆ ಮಡಿಕೇರಿ, ಜ. 8: ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕರೆ ನೀಡಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಪ್ರತಿಭಟನೆಗಳು ನಡೆದವು. ಅಂಚೆಕಚೇರಿಗಳು ಹಾಗೂ ಕೆಲ ಬ್ಯಾಂಕ್ಗಳು ಮುಚ್ಚಲ್ಪಟ್ಟಿದ್ದವು. ಇವುಗಳನ್ನು ಹೊರತುಪಡಿಸಿ ಬೇರಾವುದೇ ಬಂದ್ ನಡೆಯಲಿಲ್ಲ.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಜನಜೀವನ ಎಂದಿನಂತಿತ್ತು. ಖಾಸಗಿ ಬಸ್, ಸರ್ಕಾರಿ ಬಸ್ಗಳ ಓಡಾಟ ಎಂದಿನಂತಿತ್ತು. ಆಟೋರಿಕ್ಷಾ, ಖಾಸಗಿ ವಾಹನಗಳು ಸಂಚರಿಸಿದವು. ಶಾಲಾ - ಕಾಲೇಜು, ಕಚೇರಿಗಳು ಎಂದಿನಂತೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಎ. ಮಹದೇವ, ಬಿ.ರವಿ, ರಮೇಶ್, ಮುತ್ತಮ್ಮ ಮತ್ತಿತರರು ಮಾತನಾಡಿ, ಕೇಂದ್ರ ಸರ್ಕಾರವು ಬಂಡವಾಳ ಶಾಹಿಗಳ ಪರವಾಗಿ ನಿಂತಿದ್ದು; ಕಾರ್ಮಿಕ ವರ್ಗದ ನ್ಯಾಯಯೋಚಿತ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ. ಕಾರ್ಮಿಕ ವರ್ಗದ ಬೇಡಿಕೆಗಳನ್ನು ಮುಂದಿಟ್ಟು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದ್ದರೂ ಕೂಡ ಕೇಂದ್ರ ಸರ್ಕಾರ ಕಾರ್ಮಿಕರನ್ನು ಕಡೆಗಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ ಕಾರ್ಮಿಕ ಸಂಘಟನೆಗಳ ಈ ಹೋರಾಟ ನ್ಯಾಯ ಸಿಗುವವರೆಗೂ ಮುಂದುವರೆಯಲಿದೆ ಎಂದು ಹೇಳಿದರು.
ಬೇಡಿಕೆಗಳೇನು?
ರಾಷ್ಟ್ರೀಯ ಸಮಾನ ಕನಿಷ್ಟ ವೇತನ ರೂ. 21,000 ನಿಗದಿ ಮಾಡಬೇಕು, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ಕೋರ್ಟ್ಗಳ ಸ್ಥಾಪನೆ ಮಾಡಬೇಕು, ಎಲ್ಲರಿಗೂ ಸರ್ಕಾರದಿಂದಲೇ ರೂ. 10,000 ಕನಿಷ್ಟ ಖಾತ್ರಿ ಪಿಂಚಣಿ ಜಾರಿ ಮಾಡಬೇಕು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಸೂಕ್ತವಾದ ಸಂಗ್ರಹ ಸೌಲಭ್ಯಗಳೊಂದಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆ ನಿಗದಿ ಮಾಡಬೇಕು, ರೈತರ ಮತ್ತು ಕೂಲಿಕಾರರ ಸಾಲ ಮನ್ನಾ ಮಾಡಬೇಕು, ಗುತ್ತಿಗೆ ಪದ್ಧತಿ ರದ್ದು ಮಾಡಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು.
ರಕ್ಷಣೆ, ರೈಲ್ವೆ, ಬ್ಯಾಂಕ್, ವಿಮೆ ಮುಂತಾದ ಆಯಕಟ್ಟಿನ ಸಾರ್ವಜನಿಕ ಉದ್ದಿಮೆಗಳ ಷೇರು ವಿಕ್ರಯ ಮತ್ತು ಖಾಸಗೀಕರಣವನ್ನು ರದ್ದುಗೊಳಿಸಬೇಕು, ಕಾಡಾನೆ ಹಾವಳಿಯಿಂದ ಕಾರ್ಮಿಕರನ್ನು,
(ಮೊದಲ ಪುಟದಿಂದ) ರೈತರನ್ನು ರಕ್ಷಿಸಿ, ರೈತರ ಬೆಳೆ ನಾಶಕ್ಕೆ ಸರಿಯಾದ ನ್ಯಾಯಯುತವಾದ ಬೆಲೆ ನೀಡಬೇಕು, ನಿವೇಶನ ರಹಿತರಿಗೆ ನಿವೇಶನ ನೀಡಬೇಕು, 2018-19ರ ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ತಕ್ಷಣವೇ ಮನೆ ನಿರ್ಮಾಣ ಮಾಡಿಕೊಡಬೇಕು, ಜಿಲ್ಲೆಯಲ್ಲಿ ಪ್ರತ್ಯೇಕ ಕಾರ್ಮಿಕ ನ್ಯಾಯಾಲಯವಿದ್ದು; ನ್ಯಾಯಾಧೀಶರ ನೇಮಕವಾಗಬೇಕು, ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಬೇಕು, ಜಿಲ್ಲೆಯಲ್ಲಿನ ಮರಳಿನ ಸಮಸ್ಯೆಯನ್ನು ಪರಿಹರಿಸಬೇಕು, ಪಡಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ಪಡಿತರ ಚೀಟಿಯ ಆದಾಯ ಮಿತಿಯನ್ನು 1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.
ಸೋಮವಾರಪೇಟೆಯಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಿತು.
ಪಟ್ಟಣದ ವಿವೇಕಾನಂದ ವೃತ್ತದ ಬಳಿ ಸಮಾವೇಶಗೊಂಡ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು,ನಂತರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಜೇಸಿ ವೇದಿಕೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಮಿಕ ಮುಖಂಡ ಪಿ.ಆರ್.ಭರತ್ ಮಾತನಾಡಿ, ದೇಶದ ಶ್ರಮ ಜೀವಿಗಳಾದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಬ್ರಿಟಷರು ಕೊಟ್ಟ 43 ಕಾನೂನುಗಳ ತಿದ್ದುಪಡಿಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.
ಕಾರ್ಮಿಕ ಪರ ಕಾನೂನುಗಳು ತಿದ್ದುಪಡಿಯಾದರೆ ದೇಶದ ಕಾರ್ಮಿಕರು ಜೀವಂತ ಶವಗಳಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಜಾತ್ಯತೀತ ರಾಷ್ಟ್ರದಲ್ಲಿ ಧರ್ಮಾಂಧತೆ ಹಾಗೂ ಕೋಮುವಾದವನ್ನು ಬಿತ್ತುವ ಕೆಲಸವನ್ನು ಸಂವಿಧಾನ ವಿರೋಧಿಯಾಗಿ ಮಾಡುತ್ತಿದೆ. ಈ ದೇಶದ ದುಡಿಯುವ ವರ್ಗ ರೈತ, ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಆರೋಪಿಸಿದರು.
ಇದೇ ಸಂದರ್ಭ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಭೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ, ದಲಿತ ಹಿತರಕ್ಷಣ ಒಕ್ಕೂಟದ ಜಿಲ್ಲಾಧ್ಯಕ್ಷ ಡಿ.ಎಸ್.ನಿರ್ವಾಣಪ್ಪ, ಆದಿ ದ್ರಾವಿಡ ಸೇವಾ ಸಮಾಜದ ಗೌರವಾಧ್ಯಕ್ಷ ಬಾಬು, ಬೋವಿ ಮಹಾಸಭಾ ಜಿಲ್ಲಾಧ್ಯಕ್ಷ ಸುಜಿತ್ ಕುಮಾರ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಭಾಗೀರಥಿ, ಅಕ್ಷರ ದಾಸೋಹ ತಾಲೂಕು ಅಧ್ಯಕ್ಷೆ ಕಾವೇರಮ್ಮ, ಅಂಗನವಾಡಿ ಕಾರ್ಯಕರ್ತೆಯರ ತಾಲೂಕು ಅಧ್ಯಕ್ಷೆ ಸಾವಿತ್ರಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನವೀನ್ ಮತ್ತಿತರರು ಉಪಸ್ಥಿತರಿದ್ದರು.
ಜನಜೀವನ ಎಂದಿನಂತೆ: ಪಟ್ಟಣದಲ್ಲಿ ಜನಜೀವನ ಎಂದಿನಂತೆ ಸಾಗಿದರೆ, ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಅಂಚೆ ಕಚೇರಿ ಸಿಬ್ಬಂದಿಗಳು ಬಂದ್ಗೆ ಬೆಂಬಲ ನೀಡಿದ್ದರಿಂದ ಅಂಚೆ ಸೇವೆ ಸ್ಥಗಿತಗೊಂಡಿತ್ತು. ಒಂದೆರಡು ಬ್ಯಾಂಕ್ ಹೊರತುಪಡಿಸಿದರೆ, ಉಳಿದ ಬ್ಯಾಂಕ್ಗಳು ಎಂದಿನಂತೆ ಸೇವೆ ಒದಗಿಸಿದವು. ಆಟೋ, ಬಸ್ ಸೇರಿದಂತೆ ಇತರ ವಾಹನಗಳ ಓಡಾಟವೂ ಎಂದಿನಂತೆಯೇ ಇದ್ದವು.
ವೀರಾಜಪೇಟೆಯಲ್ಲಿ ಪ್ರತಿಭಟನೆ
ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಇಂದು ಇಲ್ಲಿನ ಜಂಟಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಕಾರರನ್ನುದ್ದೇಶಿಸಿ ಮಾತನಾಡಿದ ಸಿ.ಪಿ.ಎಂ.ನ ಜಿಲ್ಲಾ ಸಮಿತಿ ಕಾರ್ಯದರ್ಶಿ ಡಾ:ಐ.ಆರ್.ದುರ್ಗಾಪ್ರಸಾದ್ ಅವರು ಭಾರತದ ಭವಿಷ್ಯವು ಪ್ರಸಕ್ತ ಕೇಂದ್ರ ಸರಕಾರದ ಅಡಿಯಲ್ಲಿ ಆತಂಕಕಾರಿ ಹಂತವನ್ನು ತಲುಪಿದೆ. ಕೇಂದ್ರ ಸರಕಾರ ಆರ್ಥಿಕ ಹಿಂಜರಿತದಿಂದ ತೊಂದರೆಗೊಳಗಾಗಿರುವ ಕಾರ್ಮಿಕರ ಹಿತ ಕಾಯುವ ಬದಲು ಬಂಡವಾಳಗಾರರ ರಕ್ಷಣೆಗೆ ಮುಂದಾಗಿದೆ ಎಂದು ದೂರಿದರು. ಸಭೆಯನ್ನುದ್ದೇಶಿಸಿ ಸಿ.ಪಿ.ಐನ ಕೆ.ವಿ.ಸುನಿಲ್, ಎ.ಸಿ.ಸಾಬು, ಎನ್.ಡಿ.ಕುಟ್ಟಪ್ಪ, ರಜನಿಕಾಂತ್, ಮಣಿ ಮತ್ತಿತರರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪಕ್ಷದ ವತಿಯಿಂದ ತಾಲೂಕು ತಹಶೀಲ್ದಾರ್ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ತಾಲೂಕು ಕಚೇರಿ ಮುಂದೆ ನಡೆದ ಪ್ರತಿಭಟನೆಗೂ ಮುನ್ನ ಗಡಿಯಾರ ಕಂಬದಿಂದ ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ಎಂದಿನಂತಿದ್ದ ಪಟ್ಟಣ
ವೀರಾಜಪೇಟೆಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ನ ಶಾಖೆ, ಇಲ್ಲಿನ ಪ್ರಧಾನ ಅಂಚೆ ಕಚೇರಿ ಹೊರತು ಪಡಿಸಿದಂತೆ ಉಳಿದೆಲ್ಲಾ ರಾಷ್ಟ್ರೀಕೃತ ಬ್ಯಾಂಕ್ಗಳು ಮುಚ್ಚಿದ್ದವು. ಶಾಲಾ ಕಾಲೇಜುಗಳು, ಸಮುಚ್ಚಯ ನ್ಯಾಯಾಲಯ, ತಾಲೂಕು ಕಚೇರಿ, ಪ.ಪಂ. ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಿದವು. ಖಾಸಗಿ ಹಾಗೂ ಸಾರಿಗೆ ಸಂಸ್ಥೆ ಬಸ್ಸುಗಳು, ಆಟೋರಿಕ್ಷಾಗಳು ಎಂದಿನಂತೆ ಸಂಚರಿಸಿದವು.
ನಾಪೆÇೀಕ್ಲು: ನಾಪೆÇೀಕ್ಲು ಪಟ್ಟಣ ಸೇರಿದಂತೆ ಈ ವ್ಯಾಪ್ತಿಯಲ್ಲಿ ಕಾರ್ಮಿಕ ಸಂಘಟನೆಗಳು ಕರೆದಿದ್ದ ಮುಷ್ಕರಕ್ಕೆ ಯಾವದೇ ಪ್ರತಿಸ್ಪಂದನ ಕಂಡು ಬರಲಿಲ್ಲ.
ನಾಪೆÇೀಕ್ಲು ಪಟ್ಟಣದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಎಂದಿನಂತೆ ತೆರೆಯಲಾಗಿತ್ತು. ಸರಕಾರಿ, ಖಾಸಗಿ ಬಸ್ಗಳ ಓಡಾಟ ಎಂದಿನಂತಿತ್ತು. ಆಟೋ ರಿಕ್ಷಾಗಳು ಸಂಚಾರ ನಡೆಸಿದವು. ಎಲ್ಲಾ ಶಾಲಾ ಕಾಲೇಜುಗಳನ್ನು ತೆರೆಯಲಾಗಿತ್ತು.
ಸಿದ್ದಾಪುರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಮುಷ್ಕರ ಹಿನ್ನೆಲೆಯಲ್ಲಿ ಸಿದ್ದಾಪುರದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳು ಒಂದು ಗಂಟೆ ಕಾಲ ಮುಚ್ಚಿ ಬೆಂಬಲ ನೀಡಲಾಯಿತು. ಬಸ್,ಆಟೋ ರಿಕ್ಷಾ ಸೇರಿದಂತೆ ಎಲ್ಲಾ ವಾಹನಗಳು ಎಂದಿನಂತೆ ಸಂಚರಿಸುತ್ತಿದ್ದವು.
ಕುಶಾಲನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ಕುಶಾಲನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತಗೊಂಡಿತು. ರಾಷ್ಟ್ರೀಕೃತ ಬ್ಯಾಂಕುಗಳನ್ನು ಹೊರತುಪಡಿಸಿ ಅಂಗಡಿ ಮುಂಗಟ್ಟುಗಳು, ವ್ಯಾಪಾರೋದ್ಯಮ, ಜನಜೀವನ ಎಂದಿನಂತೆ ಕಂಡುಬಂತು. ಸಾರಿಗೆ, ಖಾಸಗಿ ಬಸ್ಗಳು, ಟ್ಯಾಕ್ಸಿ, ಆಟೋ ಸಂಚಾರ ಅಬಾಧಿತವಾಗಿತ್ತು. ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು.