ವೀರಾಜಪೇಟೆ, ಜ.8: ಕ್ರೀಡೆಯಿಂದ ವ್ಯಕ್ತಿ ದೈಹಿಕ ಹಾಗೂ ಮಾನಸಿಕವಾಗಿ ಕ್ರಿಯಾಶೀಲನಾಗಲು ಸಾಧ್ಯ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್ ಅಭಿಪ್ರಾಯಪಟ್ಟರು.
ಪಟ್ಟಣದ ಸಂತ ಅನ್ನಮ್ಮ ಕಾಲೇಜಿನ ಮೈದಾನದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳು ಆಯೋಜಿಸಿದ್ದ ಅಂತರ ತರಗತಿ ಕ್ರಿಕೆಟ್ ಪಂದ್ಯಾವಳಿ 'ಕ್ರಿಸ್ಮಸ್ ಮತ್ತು ನ್ಯೂ ಈಯರ್ ಕಪ್' ಗೆ ರವಿಕುಮಾರ್ ಬ್ಯಾಟಿಂಗ್ ಮಾಡುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಇಂತಹ ಪಂದ್ಯಾವಳಿಗಳ ಅಗತ್ಯವಿದೆ. ಕ್ರೀಡೆಯಿಂದ ಪರಸ್ಪರ ಪ್ರೀತಿ, ವಿಶ್ವಾಸ, ಸ್ನೇಹ ಹೆಚ್ಚಾಗುತ್ತದೆ. ಒಗ್ಗಟ್ಟಿನ ಪ್ರಾಮುಖ್ಯತೆಯನ್ನು ವಿವರಿಸುತ್ತದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆಯಲ್ಲಿಯೂ ಪಾಲ್ಗೊಳ್ಳಬೇಕು, ಆ ಮೂಲಕ ದೈಹಿಕ ಸ್ಥಿರತೆಗೊಳಿಸಬೇಕು. ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದರು.
ಈ ಸಂದÀರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪಂದ್ಯಾವಳಿಯಲ್ಲಿ 13ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯವು ಶನಿವಾರದಂದು ನಡೆಯಲಿದೆ.