ಮಡಿಕೇರಿ, ಜ.8: ಜಿಲ್ಲೆಯಾದ್ಯಂತ 7ನೇ ಆರ್ಥಿಕ ಗಣತಿಯನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸು ವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಟಾನ ಇಲಾಖೆಯ 7ನೇ ಆರ್ಥಿಕ ಗಣತಿ “ಡಿಜಿಟಲ್ ಇಂಡಿಯಾ” ಕಾರ್ಯಕ್ರಮದಡಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಸಂಗ್ರಹಿಸುವ ಸಲುವಾಗಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲಾ ಮಟ್ಟದಲ್ಲಿ ಇದೇ ಮೊದಲ ಬಾರಿಗೆ “ಡಿಜಿಟಲ್ ಇಂಡಿಯಾ” ಕಾರ್ಯಕ್ರಮದಡಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಸಂಗ್ರಹಿಸುವ ಸಲುವಾಗಿ ಮೊಬೈಲ್ ಆ್ಯಪ್‍ನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬಿಡುಗಡೆ ಮಾಡಿದರು.
ಗಣತಿಯು 3 ತಿಂಗಳುಗಳ ಕಾಲ ನಡೆಯಲಿದ್ದು, 2020ರ ಜನವರಿಯಿಂದ ಮಾರ್ಚ್‍ನಲ್ಲಿ ಅಂತ್ಯಗೊಳ್ಳಬೇಕಾಗಿ ರುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮೊಬೈಲ್ ಆ್ಯಪ್ ಬಿಡುಗಡೆ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿನ ಪ್ರತಿ ಕಟ್ಟಡಕ್ಕೆ ಸಮೀಕ್ಷಾಗಾರರು ಭೇಟಿ ನೀಡಿ ಅದರಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಯುತ್ತಿದ್ದಲ್ಲಿ ಅವುಗಳ ವಿವರಗಳನ್ನು ಗಣತಿ ಕಾರ್ಯದಲ್ಲಿ ಸಂಗ್ರಹಿಸುತ್ತಾರೆ.
ಗಣತಿದಾರರಿಗೆ ಸೂಕ್ತವಾದ ತರಬೇತಿಯನ್ನು ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆಯಿಂದ ದಿನಾಂಕ: 11-07-2019 ರಂದು ನೀಡಲಾಗಿದೆ. ಅಲ್ಲದೆ ಸಿ.ಎಸ್.ಸಿ. ವತಿಯಿಂದ ತಾಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಈವರೆಗೆ 25 ಮೇಲ್ವಿಚಾರಕರು ಹಾಗೂ 86 ಗಣತಿದಾರರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ:-ಜಿಲ್ಲೆಯಲ್ಲಿ ಸಮೀಕ್ಷೆ ಸುಗಮವಾಗಿ ನಡೆಯಲು ಅಗತ್ಯ ಸೂಚನೆ ಹಾಗೂ ಸಲಹೆಗಳನ್ನು ನೀಡಲು ಮತ್ತು ಕ್ಷೇತ್ರ ಕಾರ್ಯದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸಂಗ್ರಹಿಸಿದ ಮಾಹಿತಿಯನ್ನು ಪರಿಶೀಲಿಸಿ ದೃಢೀಕರಿಸಲು ಜಿಲ್ಲಾ ಹಂತದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ.
ಜಿಲ್ಲಾ ಸಮಿತಿಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕೈಗಾರಿಕೆ, ಕಾರ್ಮಿಕ, ಕೃಷಿ, ತೋಟಗಾರಿಕೆ, ವಾಣಿಜ್ಯ ತೆರಿಗೆ, ಪೊಲೀಸ್, ಶಿಕ್ಷಣ, ಕಾರ್ಖಾನೆ ಮತ್ತು ಬಾಯ್ಲರ್, ಸಹಕಾರ ಮುಂತಾದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸದಸ್ಯರಾಗಿರುತ್ತಾರೆ.
ಅಲ್ಲದೆ ಉಪವಿಭಾಗಾಧಿಕಾರಿ ಗಳು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಆಯುಕ್ತರು/ಮುಖ್ಯಾಧಿಕಾರಿಗಳು, ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಧಿಕಾರಿಗಳು ಮತ್ತು ಇತರರು ಸದಸ್ಯರಾಗಿರುತ್ತಾರೆ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ವೆಬ್ ಅಪ್ಲಿಕೇಶನ್ (Web ಂಠಿಠಿಟiಛಿಚಿಣioಟಿ) ರಾಷ್ಟ್ರದಲ್ಲೆ ಪ್ರಪ್ರಥಮ ಬಾರಿಗೆ ಕೆಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿ ವೆಬ್ ತಂತ್ರಾಂಶದ ಮೂಲಕ ಮೊಬೈಲ್ ಆ್ಯಪ್ ಬಳಸಿ ಗಣತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಮೊಬೈಲ್ ಆ್ಯಪ್ ತಂತ್ರಾಂಶವು ಈ ವಿಳಾಸದಲ್ಲಿ hಣಣಠಿ://45.64.104.188/ಛಿeಟಿsus ಲಭ್ಯವಿರುತ್ತದೆ.
ಗಣತಿ ಕಾರ್ಯವೈಖರಿ:-ಗಣತಿ ಕಾರ್ಯ ಕೈಗೊಳ್ಳಬಹುದಾದ/ಕೈಗೊಳ್ಳಬಾರದ ಉದ್ದಿಮೆಗಳು:- ಪ್ಲಾಂಟೇಷನ್ ಬೆಳೆಗಳನ್ನು ಸೇರಿದಂತೆ, ಋತುಕಾಲಿಕ, ವಾರ್ಷಿಕ/ಬಹು ವಾರ್ಷಿಕ ಬೆಳೆಗಳನ್ನು ಬೆಳೆಯುವ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾರ್ವಜನಿಕ ಇಲಾಖೆಗಳ ಆಡಳಿತ ಕಚೇರಿಗಳು, ರಕ್ಷಣಾ ಮಂತ್ರಾಲಯದ ಕಚೇರಿಗಳು, ಸ್ಥಳೀಯ ಸಂಸ್ಥೆಗಳ ಆಡಳಿತ ಕಚೇರಿಗಳು ಮುಂತಾದವುಗಳನ್ನು ಹಾಗೂ ಸರ್ಕಾರದಿಂದ ಕಾನೂನು ಬಾಹಿರ ಎಂದು ಘೋಷಿಸಲ್ಪಟ್ಟ ಮತ್ತು ಪಂದ್ಯ ಕಟ್ಟುವ ಚಟುವಟಿಕೆಗಳಲ್ಲಿ ತೊಡಗಿರುವ ಉದ್ದಿಮೆಗಳನ್ನು ಗಣತಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಸದರಿ ಗಣತಿಯಲ್ಲಿ ಕೃಷಿ/ಪ್ಲಾಂಟೇಷನ್ ಮೂಲಕ ಬೆಳೆಗಳನ್ನು ಬೆಳೆಯುವುದನ್ನು ಉದ್ದಿಮೆ ಎಂದು ಪರಿಗಣಿಸಿರುವುದಿಲ್ಲ. ಆದರೆ ಬೆಳೆಗಳನ್ನು ಕೊಂಡು ಮಾರಾಟ ಮಾಡುವುದನ್ನು ಉದ್ದಿಮೆ ಎಂದು ಪರಿಗಣಿಸಲಾಗಿದೆ.
ಉದ್ದಿಮೆಗಳನ್ನು ಗಣತಿ ಮಾಡುವಾಗ ಕಟ್ಟಡಗಳಲ್ಲಿ ನಡೆಯುತ್ತಿ ರುವ ಉದ್ದಿಮೆಗಳನ್ನು ಆಯಾಯ ಸ್ಥಳದಲ್ಲಿಯೇ ಗಣತಿ ಮಾಡಲಾಗು ವುದು. ರಸ್ತೆ ಬದಿಯಲ್ಲಿ, ಬೀದಿಗಳಲ್ಲಿ, ಬಯಲು ಪ್ರದೇಶದಲ್ಲಿ ಮುಂತಾದ ಯಾವುದೇ ಕಟ್ಟಡವಲ್ಲದ ಪ್ರದೇಶಗಳಲ್ಲಿ ನಡೆಯುತ್ತಿರುವ ಉದ್ದಿಮೆಗಳನ್ನು ಉದ್ದಿಮೆಯ ಮಾಲೀಕನ ಮನೆ ಯಲ್ಲಿಯೇ ಗಣತಿ ಮಾಡಲಾಗುವುದು.
ಮನೆಗಳಿಗೆ/ಉದ್ದಿಮೆಗಳಿಗೆ ಭೇಟಿ ನೀಡಿದಾಗ ಉದ್ದಿಮೆಯ ಮಾಲೀಕರು ಹಾಗೂ ಸಾರ್ವಜನಿಕರು ಅಗತ್ಯವಾದ ಎಲ್ಲಾ ವಿವರಗಳನ್ನು ಒದಗಿಸಬೇಕು. ಗಣತಿಯಲ್ಲಿ ಸಂಗ್ರಹಿಸಲಾಗುವ ಮಾಹಿತಿಗಳು ಮುಂದಿನ ವರ್ಷಗಳಲ್ಲಿ ಯೋಜನೆಗಳನ್ನು ತಯಾರಿಸಲು ಹಾಗೂ ಹಾಲಿ ಇರುವ ಉದ್ದಿಮೆಗಳ ಸ್ಥಿತಿಗತಿಗಳನ್ನು ಅರಿತು ಅವುಗಳಿಗೆ ಪ್ರೋತ್ಸಾಹ, ಮಾರುಕಟ್ಟೆ, ಆರ್ಥಿಕ ಸಹಾಯ ಮುಂತಾದ ನಿರ್ಧಾರಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಅನುಕೂಲ ವಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲಕರವಾಗುವು ದರಿಂದ ಸಾರ್ವಜನಿಕರು ಆದಷ್ಟು ನಿಖರವಾದ ಮಾಹಿತಿಗಳನ್ನು ಒದಗಿಸಲು ಸಲಹೆ ನೀಡಿದರು. ಅಲ್ಲದೇ ಕೃಷಿ ಕಂದಾಯ, ಶಿಕ್ಷಣ ಮುಂತಾದ ಇಲಾಖೆಗಳ ಗ್ರಾಮ ಮಟ್ಟದ ಇಲಾಖಾಧಿಕಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಯವರು ಗಣತಿ ಕಾರ್ಯದಲ್ಲಿ ಸಂಪೂರ್ಣವಾಗಿ ಸಹಕಾರ ನೀಡಲು ಸೂಚಿಸಿದರು.
ಅಲ್ಲದೆ ಗ್ರಾಮಾಂತರ ಪ್ರದೇಶಗಳಲ್ಲಿ ಉದ್ದಿಮೆಗಳನ್ನು ಗುರುತಿಸಲು ಗ್ರಾಮಲೆಕ್ಕಾಧಿಕಾರಿ/ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನಗರ/ಪಟ್ಟಣ ಪ್ರದೇಶಗಳಲ್ಲಿ ನಗರಸಭೆ/ಪಟ್ಟಣ ಪಂಚಾಯಿತಿ ಅಧಿಕಾರಿಗಳು/ಬಿಲ್ ಕಲೆಕ್ಟರ್‍ಗಳು ಸಮೀಕ್ಷೆ ನಡೆಸುವ ಗಣತಿದಾರರಿಗೆ/ಮೇಲ್ವಿಚಾರಕರಿಗೆ ಸಂಪೂರ್ಣ ಸಹಕಾರ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅommoಟಿ Seಡಿviಛಿe ಅeಟಿಣಡಿe (ಅSಅ) ರವರು ಗಣತಿಗಾಗಿ ಸಮರ್ಥ ರಾದ ಸಿಬ್ಬಂದಿಯನ್ನು ನೇಮಿಸಿ, ತರಬೇತಿ ನೀಡಿ ಜಿಲ್ಲೆಯಲ್ಲಿ ಯಾವುದೇ ಕಟ್ಟಡ/ ಉದ್ದಿಮೆ ಬಿಟ್ಟು ಹೋಗದಂತೆ ನಿಖರವಾಗಿ ಗಣತಿ ಕಾರ್ಯವನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಸಕಾಲದಲ್ಲಿ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಗುರುತಿನ ಪತ್ರ ಮತ್ತು ಭದ್ರತೆ:-ಗಣತಿ ಕಾರ್ಯವನ್ನು ಕೈಗೊಳ್ಳುವ ಗಣತಿದಾರರು/ ಮೇಲ್ವಿಚಾರಕರಿಗೆ ಅommoಟಿ Seಡಿviಛಿe ಅeಟಿಣಡಿe (ಅSಅ) ರವರು ಕಡ್ಡಾಯವಾಗಿ ಗುರುತಿನ ಪತ್ರವನ್ನು ನೀಡಲು ಮತ್ತು ಸಮೀಕ್ಷಾ ಸಮಯದಲ್ಲಿ ಗಣತಿದಾರರು ಗುರುತಿನ ಪತ್ರವನ್ನು ಧರಿಸಲು ಸೂಚಿಸಲಾಗಿದೆ.
ಸಭೆಯಲ್ಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಂ. ಪ್ರಕಾಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ. ವೆಂಕಟೇಶ್, ಸಿ.ಎಸ್.ಸಿ. ಸಂಸ್ಥೆಯ ವ್ಯವಸ್ಥಾಪಕ ಮಹೇಶ್, ಇತರರು ಇದ್ದರು.
ಇನ್ನಷ್ಟು ಮಾಹಿತಿ:-ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ ಇವರು ರಾಜ್ಯಾದ್ಯಂತ 7ನೇ ಆರ್ಥಿಕ ಗಣತಿಯನ್ನು ಜನವರಿ 2020 ರಿಂದ ಮಾರ್ಚ್ 2020 ರವರೆಗಿನ ಅವಧಿ ಯಲ್ಲಿ ಕೈಗೊಳ್ಳಲು ತೀರ್ಮಾನಿಸಿದ್ದು, ಅದರಂತೆ 2019ರ ನವೆಂಬರ್ 6 ರಂದು ಮಾನ್ಯ ಮುಖ್ಯಮಂತ್ರಿಗಳು 7ನೇ ಆರ್ಥಿಕ ಗಣತಿಗೆ ಸ್ವಯಂ ಮಾಹಿತಿ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಚಾಲನೆ ನೀಡಿರುತ್ತಾರೆ.
ಪರಿಚಯ:-7ನೇ ಆರ್ಥಿಕ ಗಣತಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಂತ ಉಪಯೋಗಕ್ಕಲ್ಲದ ಕೃಷಿ ಮತ್ತು ಕೃಷಿಯೇತರ ಸರಕುಗಳ ಉತ್ಪಾದನೆ, ವಿತರಣೆ, ಮಾರಾಟ, ಸೇವೆ ಮುಂತಾದ ಯಾವುದೇ ಆರ್ಥಿಕ ಚಟುವಟಿಕೆಗಳಲ್ಲಿ ಸಂಘಟಿತ ಮತ್ತು ಅಸಂಘಟಿತ ಆರ್ಥಿಕ ವಲಯದ ಎಲ್ಲಾ ಉದ್ದಿಮೆಗಳ ಗಣತಿ ಕಾರ್ಯವನ್ನು ಕೈಗೊಳ್ಳಲಾಗುವುದು. ಪ್ರಸ್ತುತ ಗಣತಿಯಲ್ಲಿ ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಖಾಸಗಿ ಸಿಬ್ಬಂದಿಯಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಗಣತಿದಾರರು ಪ್ರತಿ ಕಟ್ಟಡಕ್ಕೆ ಭೇಟಿ ನೀಡಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಪ್ರಸ್ತುತ ಗಣತಿಯು 7ನೇ ಆರ್ಥಿಕ ಗಣತಿಯಾಗಿದ್ದು, ಪ್ರತಿ 5 ವರ್ಷಗಳಿಗೊಮ್ಮೆ ಆರ್ಥಿಕ ಗಣತಿಯನ್ನು ನಡೆಸಲಾಗುತ್ತಿದೆ. ಈ ಹಿಂದಿನ ಗಣತಿಗಳನ್ನು ಸರ್ಕಾರಿ/ಅರೆ ಸರ್ಕಾರಿ ಸಿಬ್ಬಂದಿಯವರಿಂದ ನಡೆಸಲಾಗಿದ್ದು, 2014 ರಲ್ಲಿ ನಡೆದ 6ನೇ ಆರ್ಥಿಕ ಗಣತಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಒಟ್ಟು. 12,627 (ಗ್ರಾಮೀಣ 5668 ಮತ್ತು ಪಟ್ಟಣ/ನಗರ 6959 ) ಉದ್ದಿಮೆಗಳನ್ನು ಗುರುತಿಸಲಾಗಿದೆ.
ಅನುಷ್ಠಾನ ಇಲಾಖೆ: ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (ಒಔSPI) ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಓSSಔ) ಮತ್ತು ಕೇಂದ್ರ ಸರ್ಕಾರದ ಇ-ಆಡಳಿತ (ಒiಟಿisಣಡಿಥಿ oಜಿ ಇಟeಛಿಣಡಿoಟಿiಛಿs &amdiv; Iಟಿಜಿoಡಿmಚಿಣioಟಿ ಖಿeಛಿhಟಿoಟogಥಿ) ಅಡಿಯಲ್ಲಿ ನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳ (ಅommoಟಿ Seಡಿviಛಿe ಅeಟಿಣಡಿe) ಸಹಯೋಗದಲ್ಲಿ ಖಾಸಗಿ ಗಣತಿದಾರರನ್ನು ನೇಮಕಾತಿ ಮಾಡಿ ಮೊಬೈಲ್ ಆಪ್ ಮೂಲಕ ಕೈಗೊಳ್ಳಲಾಗುತ್ತಿದೆ.