‘ಕೊಡಗು ವಿಕಸನ’ ಸಂಸ್ಥೆಯ ಮೊದಲ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ತಾ. 11 ರಂದು ನಡೆಯಲಿದೆ. ಮಡಿಕೇರಿಯ ಸಂತ ಜೋಸೆಫರ ವಿದ್ಯಾಸಂಸ್ಥೆ ಸಭಾಂಗಣ ನಾಪೋಕ್ಲುವಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಅಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಅಂತರರಾಷ್ಟ್ರೀಯ ಅಥ್ಲೀಟ್ ಹಾಗೂ ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ ತೀತಮಾಡ ಅರ್ಜುನ್ ದೇವಯ್ಯ ಉಪನ್ಯಾಸ ಹಾಗೂ ಸಂವಾದ ನಡೆಸಲಿದ್ದಾರೆ. ನಂತರದಲ್ಲಿ ಪ್ರತಿ ಫೆಬ್ರವರಿ ಅಂತ್ಯದವರೆಗೆ ಪ್ರತಿ ಶನಿವಾರ ಬೆಂಗಳೂರಿನ ವಿಷಯ ತಜ್ಞರಿಂದ ವಿಶೇಷ ತರಗತಿ ಹಮ್ಮಿಕೊಳ್ಳಲಾಗಿದೆ.
ಎರಡು ವಿಭಾಗಕ್ಕೊಳಪಟ್ಟ ವ್ಯಾಪ್ತಿಯ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.