ಕುಶಾಲನಗರ, ಜ. 9: ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ 102ನೇ ಮಹಾ ಆರತಿ ಬೆಳಗುವ ಕಾರ್ಯಕ್ರಮ ತಾ. 10 ರಂದು (ಇಂದು) ನಡೆಯಲಿದೆ. ಪಟ್ಟಣದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಸಂಜೆ 5.30 ಕ್ಕೆ ಕಾರ್ಯಕ್ರಮ ಜರುಗಲಿದೆ. ಇದೇ ಸಂದರ್ಭ ಧಾರ್ಮಿಕ ಕ್ಷೇತ್ರಗಳ ಸ್ವಚ್ಛತಾ ಅಭಿಯಾನ ಅಡಿಯಲ್ಲಿ ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ನದಿ ತಟದಲ್ಲಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಆವರಣದಲ್ಲಿ ಸ್ವಚ್ಛತೆ ನಡೆಸಲಿದ್ದಾರೆ.