ಸೋಮವಾರಪೇಟೆ,ಜ.9: ಸ್ವಾಮಿ ವಿವೇಕಾನಂದ ಜಯಂತೋತ್ಸವ ಸಮಿತಿ ವತಿಯಿಂದ ಇಲ್ಲಿನ ಮಾನಸ ಸಭಾಂಗಣದಲ್ಲಿ ತಾ. 11ರಂದು ಬೆಳಿಗ್ಗೆ 11ಕ್ಕೆ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಆಚರಿಸಲಾಗುವದು ಎಂದು ಸಮಿತಿ ಕಾರ್ಯದರ್ಶಿ ಎಸ್. ಮಹೇಶ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಬಿಎಸ್. ಸದಾನಂದ ವಹಿಸಲಿದ್ದಾರೆ. ದಿವ್ಯ ಸಾನ್ನಿಧ್ಯವನ್ನು ಬಸವಾಪಟ್ಟಣದ ತೋಂಟದಾರ್ಯ ಸಂಸ್ಥಾನದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಮಠದ ಬೋಧಸ್ವರೂಪಾನಂದ ಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು ಪಾಲ್ಗೊಳ್ಳಲಿದ್ದಾರೆ.