ಸಿದ್ದಾಪುರ,ಜ.9: ಅಕ್ರಮವಾಗಿ ಲಾಟರಿ ಟಿಕೇಟ್‍ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಸಿದ್ದಾಪುರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಿದ್ದಾಪುರದ ಅಫ್ರೋಜ್ ಎಂಬುವವರು ನೆಲ್ಯಹುದಿಕೇರಿಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಬೋಜಪ್ಪ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ 50 ಟಿಕೇಟ್‍ಗಳನ್ನು ಹಾಗೂ ನಗದು ರೂ. 600ನ್ನು ವಶಪಡಿಸಿಕೊಂಡಿದ್ದಾರೆ. ಅಫ್ರೋಸ್ ವಿರುದ್ಧ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.