ಕೂಡಿಗೆ, ಜ. 10: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯಲ್ಲಿ ಮತದಾನ ನೋಂದಣಿ ಕಾರ್ಯಾಗಾರ ನಡೆಯಿತು.
ಇದರ ಅಂಗವಾಗಿ ಶಾಲಾ ಆವರಣದಲ್ಲಿ ಸಭೆ ನಡೆಸಿ ನಂತರ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಮತದಾನದ ನೋಂದಣಿ ಜಾಗೃತಿ ಮೂಡಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎ.ವಿ. ಸ್ವಾತಿ, ಹಿರಿಯ ಪ್ರಾಧ್ಯಾಪಕ ದುರ್ಗೇಶ್ ಸೋಮಯ್ಯ ಸೇರಿದಂತೆ ಶಿಕ್ಷಕರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.