ಮಡಿಕೇರಿ, ಜ. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಕನ್ನಡ ಸಂಸ್ಕøತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ತಾ. 14 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಿ. ದೇವರಾಜು ಅರಸು ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಕರ್ನಾಟಕ ಭೋವಿ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಸೀತಾರಾಮ, ಅಧ್ಯಕ್ಷ ಡಿ. ಸುಜೀತ್, ಗೌರವ ಅಧ್ಯಕ್ಷ ಆರ್.ಸಿ. ವಿಜಯ್, ಚಿಕ್ಕಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕ ಜಮೀರ್ ಅಹ್ಮದ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ ಇತರರು ಪಾಲ್ಗೊಳ್ಳಲಿದ್ದಾರೆ.