ಪೆÇನ್ನಂಪೇಟೆ, ಜ. 10: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮತ್ತು ಕೇಂದ್ರ ಸರಕಾರದ ಜನ ವಿರೋಧಿ ಕಾನೂನನ್ನು ಖಂಡಿಸಿ ಕೊಡಗು ಜಿಲ್ಲಾ ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ತಾ. 11 ರಂದು (ಇಂದು) ಮಡಿಕೇರಿಯಲ್ಲಿ ಜರುಗಲಿರುವ ಪ್ರತಿಭಟನಾ ಸಮಾವೇಶಕ್ಕೆ ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಎಂದು ಅಧ್ಯಕ್ಷ ಕೋದಂಡ ಸಂಪನ್ ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ವೀರಾಜಪೇಟೆ: ಪೌರತ್ವ ಕಾಯಿದೆ ವಿರೋಧಿಸಿ (ಸಿ.ಎ.ಎ.) ತಾ. 11 ರಂದು (ಇಂದು) ಮಡಿಕೇರಿಯ ಗಾಂಧಿ ಮೈದಾನದಲ್ಲಿ ಪ್ರಗತಿ ಪರ ಜನಾಂದೋಲನ ವೇದಿಕೆ ಕೈಗೊಂಡಿರುವ ಪ್ರತಿಭಟನೆಗೆ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪೂರ್ಣ ಬೆಂಬಲ ನೀಡಲಿದೆ ಎಂದು ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ತಿಳಿಸಿದ್ದಾರೆ.
ನಾಪೋಕ್ಲು: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಆರೋಪಿಸಿರುವ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ತಾ. 11 ರಂದು (ಇಂದು) ಕೊಡಗು ಜಿಲ್ಲಾ ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ಮಡಿಕೇರಿಯಲ್ಲಿ ನಡೆಯುವ ಜನಾಂದೋಲನ ಸಮಾವೇಶಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.