ಮಡಿಕೇರಿ, ಜ. 10: ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ; ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಚಾಲನೆ ನೀಡುವ ಮೂಲಕ; ಪ್ರತಿಯೊಬ್ಬರು ಜೀವನದಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡರೆ; ಏನನ್ನಾದರೂ ಸಾಧಿಸುವ ಅವಕಾಶ ಲಭಿಸಲಿದೆ ಎಂದು ತಿಳಿಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅವರು; ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ; ಮಿತ ಆಹಾರ, ಯೋಗ ವ್ಯಾಯಾಮಗಳಿಂದ ಕೆಲಸದ ಒತ್ತಡದಿಂದ ಸರಕಾರಿ ನೌಕರರು ನೆಮ್ಮದಿ ಕಂಡುಕೊಳ್ಳಲು ಸಾಧ್ಯವೆಂದು ನೆನಪಿಸಿದರು.

ಸರಕಾರಿ ನೌಕರರು, ಜನಪ್ರತಿನಧಿ ಗಳು ಒಗ್ಗೂಡಿ ಕ್ರೀಡಾಕೂಟವನ್ನು ಆಯೋಜಿಸುವ ಮುಖಾಂತರ; ಪರಸ್ಪರ ಏಕತೆ ಸಾಧಿಸಲು ಅವಕಾಶವಾಗಲಿದೆ ಎಂದು ಸಲಹೆ ಮಾಡಿದ ಶಾಸಕರು; ಮನುಷ್ಯ ಎಲ್ಲವನ್ನು ತನ್ನ ನಲವತ್ತು ವರ್ಷದೊಳಗೆ ಸಾಧಿಸಬಲ್ಲ ಎಂಬ ಹಿರಿಯರ ಮಾತನ್ನು ಮೆಲುಕು ಹಾಕಿದರು.

ಒತ್ತಡದಿಂದ ದೂರ ವಿರುವಂತಾಗಲು ಕ್ರೀಡೆ ಸಹಕಾರಿಯಾಗಿದ್ದು, ಪ್ರತಿನಿತ್ಯ ವ್ಯಾಯಾಮ, ಯೋಗ ಹಾಗೂ ನಡಿಗೆ ಮಾಡಿ ಆರೋಗ್ಯಯುತ ಬದುಕು ಹಾಗೂ ಜೀವನ ಪದ್ಧತಿ ರೂಢಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ 2019-20ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸರ್ಕಾರಿ ನೌಕರರು ಪ್ರತಿನಿತ್ಯದ ಜಂಜಾಟದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ ಎಂದರು.

ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ ಮಾತನಾಡಿ ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಂತಸದಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಮಾತನಾಡಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿ ಯಾಗುತ್ತದೆ. ಜೊತೆಗೆ ಕ್ರೀಯಾ ಶೀಲತೆಯಿಂದ ಕಾರ್ಯನಿರ್ವಹಿಸಲು ಸಾಧ್ಯ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ಸೋಮವಾರಪೇಟೆ ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ಪ್ರದೀಪ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಬಿ.ಎಸ್.ಗುರುರಾಜ್, ಇತರರು ಇದ್ದರು. ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷÀ ಕೆ.ಬಿ.ರವಿ ಸ್ವಾಗತಿಸಿ, ಚಿತ್ರಾವತಿ ಪ್ರಾರ್ಥಿಸಿ, ರೇವತಿ ರಮೇಶ್ ನಿರೂಪಿಸಿ, ನೌಕರರ ಸಂಘದ ಶಮಿ ವಂದಿಸಿದರು.