ಸಿದ್ದಾಪುರ, ಜ.10: ಕೇರಳದಿಂದ ಸಿದ್ದಾಪುರ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಕುಶಾಲನಗರದಿಂದ ವಾಲ್ನೂರು ತ್ಯಾಗತ್ತೂರು ಮಾರ್ಗವಾಗಿ ವೀರಾಜಪೇಟೆಗೆ ಬರುತ್ತಿದ್ದ ಆಟೋರಿಕ್ಷಾ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ತ್ಯಾಗತ್ತೂರು ಗ್ರಾಮದಲ್ಲಿ ನಡೆದಿದೆ. ಕೇರಳ ರಾಜ್ಯದ ವಡಗರದಿಂದ ಸಿದ್ದಾಪುರ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ಲಾರಿ ಕುಶಾಲನಗರದಿಂದ ವೀರಾಜಪೇಟೆಗೆ ತೆರಳುತ್ತಿದ್ದ ಆಟೋರಿಕ್ಷಾಕ್ಕೆ ತ್ಯಾಗತ್ತೂರು ಗ್ರಾಮದ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ವೀರಾಜಪೇಟೆಯ ಕಲ್ಲುಬಾಣೆ ನಿವಾಸಿ ರಫೀಕ್ ಎಂಬವರ ಆಟೋ ಸಂಪೂರ್ಣ ಜಖಂಗೊಂಡಿದೆ. ಆಟೋ ಚಾಲಕ ರಫೀಕ್‍ನ ತಲೆ ಹಾಗೂ ಕಿವಿಯ ಭಾಗಕ್ಕೆ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಲಾರಿ ಚಾಲಕ ಅಶೋಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. -ವಾಸು ಎ.ಎನ್.