ಮಡಿಕೇರಿ, ಜ. 11: ಇರ್ಪು ಶ್ರೀ ರಾಮೇಶ್ವರ ದೇವಾಲಯದಲ್ಲಿ ಫೆಬ್ರವರಿ 2 ರಿಂದ ನಡೆಯುವ ಅಷ್ಟಬಂಧ ಮತ್ತು ಬ್ರಹ್ಮಕಲಶ ಉತ್ಸವ ನಡೆಯಲಿದೆ. ಇದಕ್ಕೆ ಪೂರ್ವಭಾವಿ ಸಿದ್ಧತೆಗಾಗಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ತಾ. 13 ರಂದು ಅಪರಾಹ್ನ 2.30 ಗಂಟೆಗೆ ದೇವಾಲಯದ ಆವರಣದಲ್ಲಿ ಸಭೆಯನ್ನು ಕರೆದಿರುತ್ತಾರೆ.

ಈ ಸಭೆಗೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಗಳಾದ ತಹಶೀಲ್ದಾರರು ಮತ್ತು ಸಿಬ್ಬಂದಿಯವರು ವೀರಾಜಪೇಟೆ ತಾಲೂಕು, ಪೊಲೀಸ್ ಉಪನಿರೀಕ್ಷಕರು, ಸ್ಥಾನಿಕ ಚುನಾಯಿತ ಸದಸ್ಯರು, ಹೇರ್ಮಾಡು ಈಶ್ವರ ದೇವಸ್ಥಾನದ ಅಧ್ಯಕ್ಷರು ಮತ್ತು ಸದಸ್ಯರು, ಶ್ರೀಮಂಗಲ, ಟಿ. ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಸಂಬಂಧಿಸಿದ ಇತರ ಇಲಾಖೆಗಳ ಮುಖ್ಯಸ್ಥರು, ಇರ್ಪು ದೇವಸ್ಥಾನದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಪತ್ರಕರ್ತರು, ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತ ವೃಂದದವರನ್ನು ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.