ಮಡಿಕೇರಿ, ಜ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ತಾಲೂಕು ಯುವ ಒಕ್ಕೂಟ, ತ್ರೀನೇತ್ರ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ, ಯುವ ಸಬಲೀಕರಣ ಕೇಂದ್ರದ ಉದ್ಘಾಟನೆ ಮತ್ತು ಉಚಿತ ಲ್ಯಾಪ್ಟಾಪ್ ವಿತರಣಾ ಸಮಾರಂಭ ತಾ. 12 ರಂದು (ಇಂದು) ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.